Friday, September 25, 2026
spot_imgspot_img
spot_imgspot_img

ಶಾಹೀನ್ ಕಾಲೇಜು ವಿದ್ಯಾರ್ಥಿನಿ ಕೋಮಾ: ಆಡಳಿತದ ಹೊಣೆಗಾರಿಕೆ ಪ್ರಶ್ನಿಸಿದ ವಿಮೆನ್ ಇಂಡಿಯಾ ಮೂವ್‌ಮೆಂಟ್

- Advertisement -
- Advertisement -

ಮಂಗಳೂರು: ಬೀದರ್‌ನ ಶಾಹೀನ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಮಂಗಳೂರಿನ ಯುವತಿಯೊಬ್ಬಳು ಅನಾರೋಗ್ಯಕ್ಕೆ ತುತ್ತಾಗಿ ಗಂಭೀರ ಸ್ಥಿತಿಗೆ ತಲುಪಿ, ಇದೀಗ ಕೋಮಾ ಸ್ಥಿತಿಯಲ್ಲಿರುವುದು ಅತ್ಯಂತ ಆತಂಕಕಾರಿ ಹಾಗೂ ನೋವಿನ ಸಂಗತಿಯಾಗಿದೆ ಎಂದು ವಿಮೆನ್ ಇಂಡಿಯಾ ಮೂಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಪ್ರಿಯಾ ಬೆಳ್ಳಾರೆ ಹೇಳಿದ್ದಾರೆ .ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣವನ್ನು ಖಾತ್ರಿಪಡಿಸುವುದು ಯಾವುದೇ ಶಿಕ್ಷಣ ಸಂಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ.

ವಿಶೇಷವಾಗಿ ಹಾಸ್ಟೆಲ್‌ನ ಆಹಾರ ವ್ಯವಸ್ಥೆ ಸ್ವಚ್ಛತೆ, ಕುಡಿಯುವ ನೀರು, ವಿದ್ಯಾರ್ಥಿಗಳ ಆರೋಗ್ಯದ ಮೇಲ್ವಿಚಾರಣೆ ಹಾಗೂ ತುರ್ತು ವೈದ್ಯಕೀಯ ಕ್ರಮಗಳು ಸೇರಿದಂತೆ ಎಲ್ಲ ಅಂಶಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕಾಗಿದೆ.ಆಹಾರ ಅಥವಾ ಆಡಳಿತಾತ್ಮಕ ನಿರ್ಲಕ್ಷ್ಯವೇ ಈ ಅನಾರೋಗ್ಯಕ್ಕೆ ಕಾರಣವೆಂದು ತನಿಖೆಯಿಂದ ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಈ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಪಾರದರ್ಶಕವಾಗಿ ಮಾಹಿತಿ ನೀಡಬೇಕು.

ವಿದ್ಯಾರ್ಥಿನಿಯ ಕುಟುಂಬಕ್ಕೆ ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ, ಆಕೆಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಹಾಸ್ಟೆಲ್‌ನ ಆಹಾರ, ಆರೋಗ್ಯ ಸ್ವಚ್ಛತೆ ಮತ್ತು ಸುರಕ್ಷತಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ಸತ್ಯಾಂಶ ಬಹಿರಂಗಪಡಿಸಿ ನ್ಯಾಯಸಮ್ಮತ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಗ್ರಹಿಸುತ್ತೇವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!