Friday, October 2, 2026
spot_imgspot_img
spot_imgspot_img

ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ಬಿಗ್‌ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ನೇಮಕ

- Advertisement -
- Advertisement -

ಬೆಂಗಳೂರು: ನಿರೂಪಕಿ ಹಾಗೂ ಬಿಗ್‌ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅವರನ್ನು ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಜಾಹ್ನವಿ ಅವರ ನೇಮಕಾತಿಗೆ ಸಂಬಂಧಿಸಿದ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಜಾಹ್ನವಿ, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ವಿಶೇಷವಾಗಿ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ರೈತರ ಹೋರಾಟದಲ್ಲಿ ಜಾಹ್ನವಿ ಭಾಗವಹಿಸಿದ್ದರು.

ಬಿಡದಿ ಭಾಗದ ರೈತರ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಜೆಡಿಎಸ್ ನಾಯಕರು ನಿರಂತರವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದು, ಜಾಹ್ನವಿ ಕೂಡ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದರು.

ಹೊಸ ಜವಾಬ್ದಾರಿ ಸ್ವೀಕರಿಸಿರುವ ಜಾಹ್ನವಿ, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!