Sunday, August 23, 2026
spot_imgspot_img
spot_imgspot_img

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ LPC ಆರೋಪಿತ ಬಂಧನ

- Advertisement -
- Advertisement -

ಮಂಗಳೂರು: ಸುಮಾರು 10 ವರ್ಷಗಳಿಂದ ಪೊಲೀಸರ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಂಡಿದ್ದ LPC ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುದ್ರೋಳಿ ಕರ್ಬಲಾ ರಸ್ತೆಯ ಇಂಪೀರಿಯಲ್ ಹೋಟೆಲ್ ನಿವಾಸಿ, ಹೈದರ್ ಅವರ ಪುತ್ರ ನೌಫಾಲ್ (34) ಎಂದು ಗುರುತಿಸಲಾಗಿದೆ.ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅ.ಕ್ರ. 184/2016ರಲ್ಲಿ ಐಪಿಸಿ ಕಲಂ 143, 147, 341, 353, 504, 506 ಜೊತೆಗೆ 149ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗಿದ ಬಳಿಕ ಆರೋಪಿಯು ಪೊಲೀಸರ ದಸ್ತಗಿರಿಗೆ ಸಿಗದೇ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಈ ಹಿನ್ನೆಲೆಯಲ್ಲಿ ಆತನ ವಿರುದ್ಧ Absconding Chargesheet ಸಲ್ಲಿಸಲಾಗಿತ್ತು.ಇತ್ತೀಚೆಗೆ ಆರೋಪಿಯ ಇರುವಿಕೆಯ ಕುರಿತು ಮಾಹಿತಿ ಸಂಗ್ರಹಿಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ, ಆರೋಪಿಯನ್ನು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Related news

error: Content is protected !!