


ಮಂಗಳೂರು: ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸಲಾಗುವುದು ಎಂದು ನಾವು ಈ ಹಿಂದೆಯೇ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದ್ದೆವು. ಅದರಂತೆ ಸೂಕ್ತ ಕ್ರಮ ಕೈಗೊಳ್ಳಲು ಬದ್ಧರಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಜಾರಿಗೊಳಿಸಿದ್ದ ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಗೊಳಿಸುವುದಾಗಿ ನಾವು ಚುನಾವಣೆಯ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಮುಖ್ಯಮಂತ್ರಿಯ ಜೊತೆ ಸಮಾಲೋಚನೆ ನಡೆಸಿ ಕ್ರಮ ಜರಗಿಸಲಿದ್ದೇವೆ ಎಂದರು.ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದೊಂದು ಅತ್ಯಂತ ಸೂಕ್ಷ್ಮ ವಿಚಾರವಾಗಿದೆ. ವೈಜ್ಞಾನಿಕ ದಾಖಲೆಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತದೆ.
ಎಸ್ಐಟಿ ತಂಡವು ಸಮರ್ಥವಾಗಿ ಕೆಲಸ ಮಾಡುತ್ತಿದ್ದು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ. ಚಂದ್ರಶೇಖರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದ.ಕ.ಜಿಲ್ಲಾ ಎಸ್ಪಿ ಡಾ. ಅರುಣ್, ಉಡುಪಿ ಎಸ್ಪಿ ಹರಿರಾಂ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.








