Thursday, June 25, 2026
spot_imgspot_img
spot_imgspot_img

ಮಂಗಳೂರು: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ್ದ ಆರೋಪಿ ಬಂಧನ

- Advertisement -
- Advertisement -


ಮಂಗಳೂರು: ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಾರದ ಮುಳಿಹಿತ್ತು ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಧನುಷ್ (29), ಯತೀಶ್ ಅವರ ಪುತ್ರ, ಸುರಕ್ಷಾ ನಗರ, ಕುಂಪಲ, ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 24ರಂದು ಬೋಳಾರದ ಮುಳಿಹಿತ್ತು ಬಳಿ ಎಂಡಿಎಂಎ ಮಾರಾಟ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದರು. ಈ ವೇಳೆ ಆರೋಪಿಯಿಂದ ಸುಮಾರು 3.32 ಗ್ರಾಂ ಎಂಡಿಎಂಎ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 131/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಮತ್ತು 22(C) ಅನ್ವಯ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!