Sunday, September 6, 2026
spot_imgspot_img
spot_imgspot_img

ಕೃಷ್ಣನ ಆದರ್ಶ ಪಾಲಿಸಿದಾಗ ಮೊಸರು ಕುಡಿಕೆ ಉತ್ಸವ ಅರ್ಥಪೂರ್ಣ: ರಮಾನಾಥ ರೈ

- Advertisement -
- Advertisement -

ಮಾಣಿ: ಶ್ರೀ ಕೃಷ್ಣನ ಆದರ್ಶಗಳನ್ನು ಪಾಲಿಸಿದಾಗ ನಾವು ಆಚರಿಸುವ ಮೊಸರು ಕುಡಿಕೆ ಉತ್ಸವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.ಮಾಣಿ ಯುವಕ ಮಂಡಲದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಣಿ ಗಾಂಧಿ ಮೈದಾನದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಧಾರ್ಮಿಕ ಆಚರಣೆಗಳನ್ನು ಜಾತಿ, ಧರ್ಮ ಹಾಗೂ ಭಾಷೆಯ ಭೇದವಿಲ್ಲದೆ ಆಚರಿಸಿದಾಗ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಾಣಿ ಯುವಕ ಮಂಡಲ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಮೊಸರು ಕುಡಿಕೆ ಉತ್ಸವ ಶ್ಲಾಘನೀಯವಾಗಿದೆ ಎಂದು ರಮಾನಾಥ ರೈ ಹೇಳಿದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಬಂಟ್ವಾಳ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಸದಸ್ಯ ಬೇಬಿ ಕುಂದರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸುರೇಶ್ ಕುಲಾಲ್ ನಾವೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಪೆರಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕುಶಲ ಎಂ. ಪೆರಾಜೆ, ನೇರಳಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕ ನಿರಂಜನ್ ರೈ ಕುರ್ಲೆತ್ತಿಮಾರು ಹಾಗೂ ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಇಬ್ರಾಹಿಂ ಕೆ. ಮಾಣಿ ಉಪಸ್ಥಿತರಿದ್ದರು.ಮಾಣಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಮಾಣಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಚಂದ್ರಾವತಿ ಹಾಗೂ ಮಾಣಿ ಕರ್ನಾಟಕ ಪ್ರೌಢಶಾಲೆಯ ನಿವೃತ್ತ ಜವಾನ ತಿಮ್ಮಪ್ಪ ಕೆ. ಅವರನ್ನು ಸನ್ಮಾನಿಸಲಾಯಿತು.

ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಸಂಕೀರ್ತನೆ ನಡೆಯಿತು. ಪುರುಷರು, ಮಹಿಳೆಯರು ಹಾಗೂ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಂಗಮ್ ಬ್ರದರ್ಸ್ ಪುತ್ತೂರು ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಮಾಣಿ ಯುವಕ ಮಂಡಲದ ಗೌರವಾಧ್ಯಕ್ಷ ನಾಗರಾಜ ಶೆಟ್ಟಿ ಸಾಗು, ಉಪಾಧ್ಯಕ್ಷ ಮೆಲ್ವಿನ್ ಕಿಶೋರ್ ಮಾರ್ಟಿಸ್, ಕಾರ್ಯದರ್ಶಿ ಅಬ್ದುಲ್ ಅಝೀಝ್, ಕೋಶಾಧಿಕಾರಿ ನಾಗರಾಜ ಪೂಜಾರಿ ಕೋಡಿ, ಕ್ರೀಡಾ ಕಾರ್ಯದರ್ಶಿ ಜಯರಾಮ ಪೂಜಾರಿ, ಸಂಘಟನಾ ಕಾರ್ಯದರ್ಶಿ ರಾಜೇಶ್ ಪೂಜಾರಿ, ಜೊತೆ ಕಾರ್ಯದರ್ಶಿ ಅಕ್ಷಿತ್ ಪೂಜಾರಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಯುವಕ ಮಂಡಲದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಚಾಲಕ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

- Advertisement -

Related news

error: Content is protected !!