- Advertisement -
- Advertisement -

ಪುತ್ತೂರು: ತಾಲೂಕಿನ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಕ್ರೀಡಾಂಗಣದ ಪಕ್ಕದಲ್ಲಿ ಭಾರೀ ಮಳೆಯ ಪರಿಣಾಮ ಧರೆ ಕುಸಿತ ಸಂಭವಿಸಿದೆ.ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡದಿಂದ ಹರಿದುಬರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಮಣ್ಣು ಸಡಿಲಗೊಂಡ ಪರಿಣಾಮ ಕ್ರೀಡಾಂಗಣದ ಸಮೀಪದ ಪ್ರದೇಶದಲ್ಲಿ ಧರೆ ಕುಸಿದಿದೆ.
ಘಟನೆಯಿಂದ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದ್ದು, ಸ್ಥಳವನ್ನು ಪರಿಶೀಲಿಸಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಹಾಗೂ ಶಾಲಾ ಆಡಳಿತ ಒತ್ತಾಯಿಸಿದ್ದಾರೆ. ಮಳೆ ಮುಂದುವರಿದರೆ ಮತ್ತಷ್ಟು ಧರೆ ಕುಸಿತ ಸಂಭವಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ.
- Advertisement -








