Saturday, August 29, 2026
spot_imgspot_img
spot_imgspot_img

ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಮುಕ್ತ ಸಂವಾದ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಪ್ರಗತಿಯ ಕುರಿತು ಪೋಷಕರ ಮುಕ್ತ ಸಂವಾದ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಜೇಸಿ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾದ ರಾಧಾಕೃಷ್ಣ ಪೈ, ಕಾರ್ಯದರ್ಶಿ ರಾಘವೇಂದ್ರ ಪೈ, ಪ್ರಾಂಶುಪಾಲರಾದ ಜಯರಾಮ ರೈ, ಉಪಪ್ರಾಂಶುಪಾಲೆಯರಾದ ಕವಿತಾ ಕೆ.ಜಿ., ಹೇಮಲತಾ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಂವಾದ ಕಾರ್ಯಕ್ರಮದಲ್ಲಿ ಪೋಷಕರು ತಮ್ಮ ಮಕ್ಕಳ ಆಯಾ ತರಗತಿಯ ಶಿಕ್ಷಕರೊಂದಿಗೆ ಶೈಕ್ಷಣಿಕ ಪ್ರಗತಿ, ಕಲಿಕೆಯ ಮಟ್ಟ ಹಾಗೂ ಅಗತ್ಯವಿರುವ ಸುಧಾರಣೆಗಳ ಕುರಿತು ಮುಕ್ತವಾಗಿ ಚರ್ಚಿಸಿದರು. ಶಿಕ್ಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಕುರಿತು ಪೋಷಕರಿಗೆ ಮಾಹಿತಿ ನೀಡಿ, ಮುಂದಿನ ದಿನಗಳಲ್ಲಿ ಉತ್ತಮ ಪ್ರಗತಿ ಸಾಧಿಸಲು ಅಗತ್ಯವಾದ ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.ಪೋಷಕರು ಹಾಗೂ ಶಿಕ್ಷಕರ ನಡುವಿನ ಪರಸ್ಪರ ಸಂವಾದದ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.

- Advertisement -

Related news

error: Content is protected !!