- Advertisement -
- Advertisement -

ಬೆಂಗಳೂರು, ಸೆ.8: ಅತ್ಯಾಚಾರ ಪ್ರಕರಣದಲ್ಲಿ ಸಜಾ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೈಲು ಕೊಠಡಿಯಲ್ಲಿ ಮೊಬೈಲ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.ಪ್ರಜ್ವಲ್ ರನ್ನು ಮಂಗಳವಾರ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಪರಪ್ಪನ ಆಗ್ರಹಾರ ಠಾಣೆ ಪೊಲೀಸರು ಬಾಡಿ ವಾರೆಂಟ್ ಮೇಲೆ ಪ್ರಜ್ವಲ್ ರನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು.
ಇದಕ್ಕೆ ಪ್ರಜ್ವಲ್ ಪರ ವಕೀಲರಾದ ಅರುಣ್ ಜಿ. ಆಕ್ಷೇಪಿಸಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅಂತಿಮವಾಗಿ ಪೊಲೀಸರ ಮನವಿಯನ್ನು ಪುರಸ್ಕರಿಸಿದ ಪ್ರಜ್ವಲ್ ರನ್ನು ಎರಡು ದಿನಗಳ ಕಾಲ ಪರಪ್ಪನ ಆಗ್ರಹಾರ ಠಾಣೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲು ಆದೇಶಿಸಿದೆ.
- Advertisement -








