Thursday, July 23, 2026
spot_imgspot_img
spot_imgspot_img

ವಿಟ್ಲ: ಅಶೋಕ್ ಕುಮಾರ್ ರೈಗೆ ಸಚಿವ ಸ್ಥಾನ ಸಿಗಲೆಂದು ಕಾಂಗ್ರೆಸ್ ಮುಖಂಡರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ*

- Advertisement -
- Advertisement -

ವಿಟ್ಲ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ, ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ದೊರಕಲಿ ಎಂದು ಕೋರಿ ವಿಟ್ಲದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರ ನೇತೃತ್ವದಲ್ಲಿ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀಧರ ಶೆಟ್ಟಿ ಪುಣಚ, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಶ್ರೀಧರ ಬಾಲೆಕಲ್ಲು, ಬ್ಲಾಕ್ ಉಪಾಧ್ಯಕ್ಷ ದಿನಕರ ಆಳ್ವ, ಎಸ್ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಪುತ್ತೂರು ಕ್ಷೇತ್ರದ ಅಭಿವೃದ್ಧಿಗೆ ಅಶೋಕ್ ಕುಮಾರ್ ರೈ ಅವರ ಸೇವೆ ಮತ್ತು ನಾಯಕತ್ವವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಖಂಡರು ಆಶಯ ವ್ಯಕ್ತಪಡಿಸಿದರು.

- Advertisement -

Related news

error: Content is protected !!