Saturday, June 13, 2026
spot_imgspot_img
spot_imgspot_img

ಬಿಲ್ಲವ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ- ಬರ್ಕೆ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು

- Advertisement -
- Advertisement -

ಮಂಗಳೂರು, ಜೂ. 9: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಬಗ್ಗೆ ಅವಹೇಳನಕಾರಿ ವಿಡಿಯೋ ಹಾಗೂ ಬರಹವನ್ನು ಪೋಸ್ಟ್ ಮಾಡಿರುವ ಆರೋಪದ ಮೇರೆಗೆ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಬಿರುವೆರ್ ಕುಡ್ಲ (ರಿ) ಮಂಗಳೂರು ಘಟಕದ ಅಧ್ಯಕ್ಷ ರಾಕೇಶ್ ಅವರು ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸೋಮವಾರ ಸಂಜೆ ಬಿಜೈ ಸರ್ಕಾರಿ ಬಸ್ ನಿಲ್ದಾಣದಲ್ಲಿ ಫೇಸ್‌ಬುಕ್ ವೀಕ್ಷಿಸುತ್ತಿದ್ದ ವೇಳೆ ಅನಿತಾ ಕಾಸರಗೋಡು ಹೆಸರಿನ ಖಾತೆಯಲ್ಲಿ ಪ್ರಕಟಗೊಂಡಿದ್ದ ಪೋಸ್ಟ್ ಗಮನಕ್ಕೆ ಬಂದಿದ್ದು, ಅದರಲ್ಲಿ ಬಿಲ್ಲವ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿದ್ದು, ಧರ್ಮ ಹಾಗೂ ವರ್ಗಗಳ ನಡುವೆ ಕೋಮುಭಾವನೆ ಉಂಟುಮಾಡುವ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಪ್ರಚೋದನೆ ನೀಡುವ ಅಂಶಗಳಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!