Thursday, July 30, 2026
spot_imgspot_img
spot_imgspot_img

ಆಪರೇಷನ್ ರೈಸ್ & ಬೇಡ BRO’ ಜಾಗೃತಿ ಅಭಿಯಾನಕ್ಕೆ ಇಂದು ಚಾಲನೆ; ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಸಂದೇಶ

- Advertisement -
- Advertisement -

ಮಂಗಳೂರು, ಜು. 30: ಮಂಗಳೂರು ನಗರ ಪೊಲೀಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ಸರ್ಕಾರದ ‘ಆಪರೇಷನ್ ರೈಸ್ & 3 BRO’ ಉಪಕ್ರಮದಡಿ ಮಾದಕ ವಸ್ತುಗಳ ವಿರುದ್ಧ ರಾಜ್ಯವ್ಯಾಪಿ ಜಾಗೃತಿ ಅಭಿಯಾನಕ್ಕೆ ಗುರುವಾರ (ಜು.30) ಚಾಲನೆ ನೀಡಲಾಗುತ್ತಿದೆ.ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಉದ್ಘಾಟಿಸಲಿದ್ದಾರೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಡಿಸಿಪಿಗಳಾದ ಮಿಥುನ್ ಹೆಚ್.ಎನ್., ಕೆ. ರವಿಶಂಕರ್, ಉಮೇಶ್ ಪಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರವಾಡೆ ವಿನಾಯಕ ಕಾರಭಾರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ಯುವಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

Related news

error: Content is protected !!