
ವಿಟ್ಲ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಪಂಜ ಸ್ಥಳೀಯ ಸಂಸ್ಥೆ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಸಹಭಾಗಿತ್ವದಲ್ಲಿ ಅ.25ರಂದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಮೈಸೂರು ವಿಭಾಗದ ಎಂಟು ಜಿಲ್ಲೆಗಳ ತಂಡಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿಠ್ಠಲ್ ಜೇಸೀಸ್ ಶಾಲೆಯ ವಿದ್ಯಾರ್ಥಿಗಳು, ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸುವ ಅರ್ಹತೆ ಗಳಿಸಿದ್ದಾರೆ.
ವಿಜೇತ ವಿದ್ಯಾರ್ಥಿಗಳಾದ ಆತ್ಮಿಕಾ ಗೌರಿ (10ನೇ ತರಗತಿ), ಶಿವಾನಿ ಅಮೈ (10ನೇ ತರಗತಿ), ಸಾತ್ವಿಕಾ ಎನ್.ಕೆ. (9ನೇ ತರಗತಿ), ಭುವಿ ಪಿ. ಕಾಯರ್ ಮಾರ್ (9ನೇ ತರಗತಿ), ಸಾತ್ವಿಕಾ ನಾಯಕ್ (9ನೇ ತರಗತಿ), ತನ್ವಿ ಪಿ.ಕೆ. (9ನೇ ತರಗತಿ), ಕೀರ್ತನಾ (9ನೇ ತರಗತಿ) ಹಾಗೂ ಸಮನ್ವಿ ಆರ್.ಕೆ. (7ನೇ ತರಗತಿ) ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.








