Sunday, September 13, 2026
spot_imgspot_img
spot_imgspot_img

ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಿ, ಅವಾಚ್ಯವಾಗಿ ಬೈದು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಹನೀಫ್ ಬಂಧಿತ ಆರೋಪಿ.

ವೇಣೂರು ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಮಹಿಳೆ ಸೆ.7ರಂದು ಇತರರೊಂದಿಗೆ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನೀಫ್ ಅತಿಕ್ರಮ ಪ್ರವೇಶ ಮಾಡಿ ಜಾತಿನಿಂದನೆ ಮಾಡಿದ್ದಾನೆ. ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿದ್ದಲ್ಲದೆ, ಅನುಚಿತವಾಗಿ ವರ್ತಿಸಿ ಜಮೀನಿನಲ್ಲಿದ್ದ ಕೃಷಿ ಹಾಗೂ ಬೇಲಿಗೆ ಹಾನಿ ಮಾಡಿದ್ದು, ಸುಮಾರು ₹1.30 ಲಕ್ಷ ನಷ್ಟ ಉಂಟುಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಕುರಿತು ಮಹಿಳೆ ಸೆ.8ರಂದು ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅ.ಕ್ರ. 63/2026ರಂತೆ ಬಿಎನ್‌ಎಸ್‌ನ ವಿವಿಧ ಕಲಂಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ಹನೀಫ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!