- Advertisement -
- Advertisement -

ಮಂಗಳೂರು : ನಗರದ ವೆಸ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಳಿಕ ಅವರ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರ ಕಳವುಗೈದ ಘಟನೆಗೆ ಸಂಬಂಧಿಸಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜು.26ರಂದು ಬೆಳಗ್ಗೆ 8ಕ್ಕೆ ಸುಂದರ ಎಂಬವರ ಪತ್ನಿ ಜಾನಕಿ (53)ಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೆಸ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.ಮೃತದೇಹವನ್ನು ಪರಿಶೀಲಿಸುವ ವೇಳೆ ಜಾನಕಿಯ ಕೊರಳಲ್ಲಿ ಸುಮಾರು 32 ಗ್ರಾಂ ತೂಕದ ಮಾಂಗಲ್ಯ ಸರ ಕಳವಾಗಿದೆ. ಅದರ ಬೆಲೆ 1.50 ಲಕ್ಷ ರೂ. ಆಗಿರಬಹುದು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








