Friday, March 29, 2024
spot_imgspot_img
spot_imgspot_img

5 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು!

- Advertisement -G L Acharya panikkar
- Advertisement -

ಕೊಪ್ಪಳ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಬಾಲಕಿಯ ತಾಯಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್​ 31ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿ ತಾಯಿ ನ.​2 ರಂದು ಗಂಗಾವತಿ ನಗರ ಠಾಣೆಯಲ್ಲಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ದೂರು ದಾಖಲಿಸಿದ್ದಾರೆ. ಕಳೆದ ತಿಂಗಳು 31 ರಂದು ಒಂದು ರೂಪಾಯಿ ನೀಡಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಗಂಗಾವತಿ ನಗರ ಠಾಣೆಯಲ್ಲಿ ಐಪಿಎಸ್​ 376, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!