Saturday, August 8, 2026
spot_imgspot_img
spot_imgspot_img

ಕೋಲ್ಕತ್ತಾದಲ್ಲಿ 5.4 ತೀವ್ರತೆಯ ಭೂಕಂಪ!

- Advertisement -
- Advertisement -

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದೆ. ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.

ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯದಿಂದ ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ. ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾವುದೇ ಸಾವುಗಳು, ದೊಡ್ಡ ಹಾನಿಯ ವರದಿಗಳು ಬಂದಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಜನರು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಮಧ್ಯಾಹ್ನ 1.22 ಕ್ಕೆ ಭೂಕಂಪ ಸಂಭವಿಸಿದೆ. ಅದರ ತೀವ್ರತೆ ತುಂಬಾ ಹೆಚ್ಚಾಗಿತ್ತು.

ಬಾಂಗ್ಲಾದೇಶದಲ್ಲೂ ಭೂಕಂಪದ ಅನುಭವವಾಗಿದೆ. ವರದಿಗಳ ಪ್ರಕಾರ, ಫೆಬ್ರವರಿ 27 ರಂದು ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ.

- Advertisement -

Related news

error: Content is protected !!