Saturday, June 28, 2025
spot_imgspot_img
spot_imgspot_img

5, 8ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 13ರಿಂದ ನಡೆಯಬೇಕಿದ್ದ ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಶಿಕ್ಷಣ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಪರೀಕ್ಷೆ ನಡೆಸಬಹುದು ಎಂದು ಹೇಳಿದೆ.

ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು, ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಹೆರೂರ್‌ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮುಂದಿನ ವರ್ಷದಿಂದ ಪರೀಕ್ಷೆ ನಡೆಸಬಹುದು, ಆಯಾ ನಿಯಮಗಳಿಗನುಸಾರವಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

- Advertisement -

Related news

error: Content is protected !!