Friday, April 26, 2024
spot_imgspot_img
spot_imgspot_img

ಉತ್ತರ ಪ್ರದೇಶ: ಮತ್ತೊಂದು ಹೀನ ಕೃತ್ಯ-ಐದು ವರ್ಷದ ಮಗುವಿನ ಮೇಲೆ ಅಪ್ರಾಪ್ತರಿಂದ ಅತ್ಯಾಚಾರ!!

- Advertisement -G L Acharya panikkar
- Advertisement -

ಲಕ್ನೋ: ಉತ್ತರ ಪ್ರದೇಶದಲ್ಲಿ ಮತ್ತೊಂದು ಹೀನ ಕೃತ್ಯ ಸಂಭವಿಸಿದೆ. ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಮಗುವನ್ನು ಅಪಹರಿಸಿದ ಅಪ್ರಾಪ್ತರು ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ.

ಉತ್ತರ ಪ್ರದೇಶದ ಜಲುನಾ ಜಿಲ್ಲೆಯ ಆಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ವರದಿಯಾಗಿದೆ. ಇಬ್ಬರು ಅಪ್ರಾಪ್ತರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವದೇಶ್ ಸಿಂಗ್ ತಿಳಿಸಿದ್ದಾರೆ.

ಮೂವರು ಅಪ್ರಾಪ್ತರು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!