Friday, May 3, 2024
spot_imgspot_img
spot_imgspot_img

5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿ ಅರೆಸ್ಟ್‌

- Advertisement -G L Acharya panikkar
- Advertisement -

5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಗೋಣಿಚೀಲದಲ್ಲಿ ಮೃತದೇಹವನ್ನು ತುಂಬಿಸಿ ಹೂತುಹಾಕಿದ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.

ದುಷ್ಕೃತ್ಯ ನಡೆಸಿದ ಆರೋಪಿಯನ್ನುಪೊಲೀಸರು ಬಂಧಿಸಿದ್ದು, ಕುಡಿದ ಅಮಲಿನಲ್ಲಿದ್ದರಿಂದ ಆತನಿಂದ ಸಂಪೂರ್ಣ ಮಾಹಿತಿ ಪಡೆಯಲು ಕೆಲವು ಗಂಟೆಗಳೇ ಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ ಮೂಲದ ದಂಪತಿಯ 5 ವರ್ಷದ ಮಗಳು ಶುಕ್ರವಾರ ಸಂಜೆ ನಾಪತ್ತೆಯಾಗಿದ್ದು, ಆರೋಪಿ ಆಕೆಯನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯನ್ನು ಅಸ್ಫಾಕ್ ಅಸ್ಲಾಮ್ ಎಂದು ಗುರುತಿಸಲಾಗಿದ್ದು, ಸಿಸಿಟಿವಿಯಲ್ಲಿ ಆತ ಬಾಲಕಿಯನ್ನು ಕರೆದುಕೊಂಡು ಹೋಗುವ ದೃಶ್ಯ ಕಂಡುಬಂದಿದೆ. ಆದ್ದರಿಂದ ಆತನನ್ನು ಅದೇ ದಿನ ರಾತ್ರಿ 9:30ಕ್ಕೆ ವಶಕ್ಕೆ ಪಡೆದಿದ್ದರು.

ಶನಿವಾರ ಬೆಳಗ್ಗೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಬಾಲಕಿಯನ್ನು ಕೊಂದು ಹೂತುಹಾಕಿದ ಜಾಗವನ್ನು ತೋರಿಸಿದ್ದಾನೆ. ಆರೋಪಿ ಇತ್ತೀಚಿಗೆ ಬಾಲಕಿ ಮತ್ತು ಆಕೆಯ ಕುಟುಂಬ ವಾಸಿಸುತ್ತಿದ್ದ ಕಟ್ಟಡಕ್ಕೆ ತೆರಳಿದ್ದ. ಬಳಿಕ ಆಕೆಯನ್ನು ಅಲ್ಲಿಂದ ಬೇರೆಡೆಗೆ ಕರೆದೊಯ್ದು ಲೈಂಗಿಕ ತೃಷೆ ತೀರಿಸಿಕೊಂಡ ಬಳಿಕ ಆಕೆಯ ಕತ್ತು ಹಿಸುಕಿ ಕೊಂದು ಆಕೆಯ ಮೃತದೇಹ ಯಾರಿಗೂ ಕಾಣದ ರೀತಿಯಲ್ಲಿ ಮುಚ್ಚಲು ಕಸಗಳು ಮತ್ತು ಗೋಣಿ ಚೀಲಗಳನ್ನು ಬಳಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬಾಲಕಿ ನಾಪತ್ತೆಯಾಗಿದ್ದು, ಸಂಜೆ 5:30ರ ವೇಳೆಗೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ. ಮಗಳು ನಾಪತ್ತೆಯಾದ ಹಿನ್ನೆಲೆ ಪೋಷಕರು ರಾತ್ರಿ 7:30ರ ಸುಮಾರಿಗೆ ದೂರು ದಾಖಲಿಸಿದ್ದು, ಮಾಹಿತಿಯ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!