Saturday, October 31, 2026
spot_imgspot_img
spot_imgspot_img

ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

- Advertisement -
- Advertisement -

ಮಡಿಕೇರಿ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ವಿದ್ಯಾರ್ಥಿ ಸಹಿತ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ

ಅ. 30ರಂದು ಗೌಳಿಬೀದಿಯ ಸಾರ್ವಜನಿಕ ಮೈದಾನದ ಬದಿಯಲ್ಲಿ ಆರೋಪಿಗಳು ಕೆಎ 12 ಬಿ 5552 ನೋಂದಣಿ ಸಂಖ್ಯೆಯ ಆಟೋ ರಿಕ್ಷಾವನ್ನು ನಿಲ್ಲಿಸಿಕೊಂಡು, ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಗ್ರಾಹಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಕುರಿತು ನಗರ ಗುಪ್ತ ದಳದ ಸಿಬ್ಬಂದಿ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಾದಕ ವಸ್ತು ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಮಡಿಕೇರಿ ಡಿವೈಎಸ್‌ಪಿ ಸೂರಜ್, ವೃತ್ತ ನಿರೀಕ್ಷಕ ಚಂದ್ರಶೇಖ‌ರ್, ಠಾಣಾಧಿಕಾರಿ ಶ್ರೀಧರ್ ಹಾಗೂ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ರಾಜೇಶ್, ಪುಂಡರಿಕಾಕ್ಷ, ರೋಹಿತ್, ಪ್ರದೀಪ್ ಕುಮಾ‌ರ್, ಪ್ರಸಾದ್ ಕುಮಾ‌ರ್, ಪ್ರಸನ್ನ ಮತ್ತು ಸಿದ್ದಲಿಂಗಪ್ಪ ರಾಗಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ನಗರದ ಗೌಳಿಬೀದಿ ನಿವಾಸಿ, ಆಟೋ ಚಾಲಕ ರುಹೇಝ್ (29) ಹಾಗೂ ಮಾರ್ಕೆಟ್ ನಿವಾಸಿ, ಬಿಬಿಎ ವಿದ್ಯಾರ್ಥಿ ಮುಹಮ್ಮದ್ ಶಾಕೀಬ್ (19) ಬಂಧಿತ ಆರೋಪಿಗಳು.

ಆರೋಪಿಗಳಿಂದ 4.4 ಲಕ್ಷ ರೂ. ಮೌಲ್ಯದ 11 ಗ್ರಾಂ ಎಂಡಿ ಎಂ ಎ ಐದು ಮೊಬೈಲ್ ಫೋನ್‌ಗಳು, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ, ಒಂದು ತೂಕದ ಯಂತ್ರ ಹಾಗೂ ಒಂದು ಬ್ಯಾಗ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!