- Advertisement -
- Advertisement -

ಮಂಗಳೂರು: ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ.ಕಳೆದ ವರ್ಷದ ಮಾರ್ಚ್ನಲ್ಲಿ ನಡೆದ ಕೃತ್ಯಕ್ಕೆ ಸಂಬಂಧಿಸಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಹೈಕೋರ್ಟ್ ಮೊರೆ ಹೋಗಿದ್ದರು.ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.
- Advertisement -








