


ಕ್ಯಾಲಿಫೋರ್ನಿಯಾ: ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಪ್ರಮುಖ ಸದಸ್ಯ ಹ್ಯಾರಿ ಬಾಕ್ಸರ್ನನ್ನು ಅಮೆರಿಕ ಪೊಲೀಸರು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಿದ್ದಾರೆ.ಹರಿಚಂದ್ ಜಾಟ್ ಎಂಬುದು ಹ್ಯಾರಿ ಬಾಕ್ಸರ್ನ ನಿಜವಾದ ಹೆಸರಾಗಿದೆ. ಹರಿಯಾಣದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ಗಳ ಪಟ್ಟಿಯಲ್ಲಿರುವ ಈತ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸುಲಿಗೆ ಚಟುವಟಿಕೆಗಳನ್ನು ನಿರ್ವಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಎನ್ನಲಾಗಿದೆ.

ದೆಹಲಿ ಪೊಲೀಸ್ ವಿಶೇಷ ಘಟಕ ಹಾಗೂ ಹರಿಯಾಣ ವಿಶೇಷ ಕಾರ್ಯಪಡೆ ನೀಡಿದ ಮಾಹಿತಿಯ ಆಧಾರದಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.ಭಾರತಕ್ಕೆ ಕರೆತರುವ ಸಾಧ್ಯತೆಬಂಧಿತ ಹ್ಯಾರಿ ಬಾಕ್ಸರ್ನನ್ನು ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಭಾರತೀಯ ತನಿಖಾ ಸಂಸ್ಥೆಗಳು ಕಾನೂನು ಪ್ರಕ್ರಿಯೆ ಆರಂಭಿಸುವ ಸಾಧ್ಯತೆಯಿದೆ. ಈ ಪ್ರಕ್ರಿಯೆಯಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಪ್ರಮುಖ ಸಮನ್ವಯ ಸಂಸ್ಥೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ.ರೋಹಿತ್ ಶೆಟ್ಟಿ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ದಾಳಿ ನಡೆದ ಬಳಿಕ, ಅದರ ಹೊಣೆಯನ್ನು ಹ್ಯಾರಿ ಬಾಕ್ಸರ್ ಹೊತ್ತುಕೊಂಡಿದ್ದ ಎನ್ನಲಾಗಿದೆ.
ಅಲ್ಲದೆ, ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಪ್ರಕಟಿಸುವ ಮೂಲಕ ಹಾಗೂ ಆಡಿಯೊ ಸಂದೇಶಗಳನ್ನು ಕಳುಹಿಸುವ ಮೂಲಕ ಬಾಲಿವುಡ್ನ ಹಲವು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿದ್ದ ಆರೋಪವೂ ಆತನ ಮೇಲಿದೆ.ಹತ್ಯೆಗೆ ಯತ್ನ, ಗುಂಡಿನ ದಾಳಿ ಹಾಗೂ ಬೆದರಿಕೆ ಹಾಕಿ ಸುಲಿಗೆ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.ಇತ್ತೀಚೆಗಷ್ಟೇ ಗ್ಯಾಂಗ್ಸ್ಟರ್ಗಳಾದ ಹಿಮಾಂಶು ಭಾವು ಮತ್ತು ನೀರಜ್ ಫರೀದ್ಪುರಿ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿತ್ತು. ಇದೀಗ ಹ್ಯಾರಿ ಬಾಕ್ಸರ್ ಕೂಡ ಬಂಧನಕ್ಕೊಳಗಾಗಿರುವುದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಮತ್ತೊಂದು ಹಿನ್ನಡೆಯಾಗಿದೆ.








