ಬಂಧನರುವನಂತಪುರಂ: ಕೇರಳಂ ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಅವರ ಕುಟುಂಬದ ಸದಸ್ಯರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಆರೋಪಿಯನ್ನು ಆಟ್ಟಿಂಗಲ್ ನಿವಾಸಿ ಸೋನಿ ಥಾಮಸ್ ಎಂದು ಗುರುತಿಸಲಾಗಿದೆ.”ಶುಕ್ರವಾರ ಸಂಜೆ 6.50ಕ್ಕೆ ತಿರುವನಂತಪುರಂ ಡಿಪಿಸಿಸಿ ಕಚೇರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಸಿಎಂ ವಿಡಿ ಸತೀಶನ್ ಮತ್ತು ಅವರ ಕುಟುಂಬದ ಸದಸ್ಯರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಕಾರಣವನ್ನು ಕೇಳಿದಾಗ, ಸತೀಶನ್ ಅವರನ್ನು ನಾನು ಇಷ್ಟಪಡುವುದಿಲ್ಲ ಎಂದು ಆರೋಪಿ ಹೇಳಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ ಸಂಜೆ 6.53ಕ್ಕೆ ಎರಡನೇ ಬಾರಿ ಫೋನ್ ಮಾಡಿದ್ದಾನೆ. ಈ ವೇಳೆ ಕರೆ ಸ್ವೀಕರಿಸಿದ ಪೊಲೀಸ್ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿ ಮುಖ್ಯಮಂತ್ರಿಗೆ ಸಾಕಷ್ಟು ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆಯೇ ಎಂದು ಪ್ರಶ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡ ಕಂಟೋನ್ಮೆಂಟ್ ಪೊಲೀಸರು ಫೋನ್ ಸಂಖ್ಯೆ ಆಧಾರದಲ್ಲಿ ಆರೋಪಿ ಥಾಮಸ್ ನನ್ನು ಆಟ್ಟಿಂಗಲ್‌ನಿಂದ ವಶಕ್ಕೆ ಪಡೆದರು.
ಈತ ಫೋನ್ ಕರೆ ವೇಳೆ ಮದ್ಯಪಾನ ಮಾಡಿದ್ದ ಎನ್ನುವುದು ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಪತ್ತೆ ಹಚ್ಚಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.








