Friday, November 20, 2026
spot_imgspot_img
spot_imgspot_img

ಮಂಗಳೂರು: ಸುರೇಂದ್ರನ್ ಕೊಲೆ ಪ್ರಕರಣ; ಸಂತೋಷ್‌ಗೆ ಜೀವಾವಧಿ ಶಿಕ್ಷೆ, ಸಹ ಆರೋಪಿ ಸಿದ್ದಪ್ಪ ಖುಲಾಸೆ

- Advertisement -
- Advertisement -

ಮಂಗಳೂರು: ಕೆಲಸದ ಹಣ ನೀಡದ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿ ಸಂತು ಅಲಿಯಾಸ್ ಸಂತೋಷ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿದೆ.2020ರ ನವೆಂಬರ್ 3ರಂದು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ ಈ ಕೊಲೆ ನಡೆದಿತ್ತು. ಕೆಲಸ ಮಾಡಿದ ಹಣವನ್ನು ನೀಡಿಲ್ಲ ಎಂಬ ಕಾರಣಕ್ಕೆ ಸಂತೋಷ್ ತನ್ನ ಸಹಚರ ಸಿದ್ದಪ್ಪನೊಂದಿಗೆ ಹಣ ಕೇಳಲು ಸುರೇಂದ್ರನ್ ಮನೆಗೆ ತೆರಳಿದ್ದ. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಹಣ ಕೇಳಿದ್ದಾನೆ.

ಈ ವಿಚಾರವಾಗಿ ಮಾತಿನ ಚಕಮಕಿ ನಡೆದು, ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಗೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

- Advertisement -

Related news

error: Content is protected !!