Tuesday, August 4, 2026
spot_imgspot_img
spot_imgspot_img

ಪ್ರಚೋದನಾಕಾರಿ ಭಾಷಣ” ಪ್ರಕರಣದಲ್ಲಿ ಶಿಕ್ಷೆ ವಿಧಿಸಿದ ಮಾನ್ಯ ನ್ಯಾಯಾಲಯ..!-ಆರೋಪಿ ರಿಯಾಜ್ ಪರಂಗಿಪೇಟೆಗೆ 6 ತಿಂಗಳ ಕಾರಾಗೃಹ ವಾಸ

- Advertisement -
- Advertisement -

ಬೆಳ್ತಂಗಡಿ: 2015ರಲ್ಲಿ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆಗೆ ಬೆಳ್ತಂಗಡಿ ನ್ಯಾಯಾಲಯ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10,000 ದಂಡ ವಿಧಿಸಿದೆ.

2015ರ ಜುಲೈ 23ರಂದು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬೆಳ್ತಂಗಡಿ ವಲಯದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪದಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 315/2015ರಂತೆ ಭಾರತೀಯ ದಂಡ ಸಂಹಿತೆಯ (IPC) ಕಲಂ 153(ಎ) ಮತ್ತು 295(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್. ಅವರು ಪ್ರಕರಣದ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(ಎ) ಅಡಿಯಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಆಶೀತಾ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದರು.

- Advertisement -

Related news

error: Content is protected !!