Saturday, November 21, 2026
spot_imgspot_img
spot_imgspot_img

ಮಂಗಳೂರು: ವಾಹನ ಸವಾರರಿಗೆ ಸಿಹಿಸುದ್ದಿ: ಬಾಕಿ ಟ್ರಾಫಿಕ್ ದಂಡಕ್ಕೆ ಶೇ.50 ರಿಯಾಯಿತಿ- ನ.21 ರಿಂದ ಡಿ. 11 ರವರೆಗೆ ಅವಕಾಶ

- Advertisement -
- Advertisement -

ಮಂಗಳೂರು : ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ರಾಜ್ಯ ಸರಕಾರ ಮತ್ತೊಮ್ಮೆ ಗುಡ್ ನ್ಯೂಸ್ ನೀಡಿದ್ದು, ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿದೆ.

ಡಿ.12ರಂದು ಆಯೋಜಿಸಿರುವ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ, ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್ ಮೂಲಕ ಬಾಕಿ ಇರುವ ಪ್ರಕರಣಗಳ ದಂಡಕ್ಕೆ ನ.21ರಿಂದ ಡಿಸೆಂಬರ್ 11ರವರೆಗೆ ಶೇ.50ರಷ್ಟು ರಿಯಾಯಿತಿ ಕಲ್ಪಿಸಲಾಗಿದೆ.

ರಾಜ್ಯ ಸರಕಾರದ ಆದೇಶದಂತೆ ಸಾರಿಗೆ ಇಲಾಖೆಯಲ್ಲಿ 1991ರಿಂದ 2025ರವರೆಗಿನ ಅವಧಿಯಲ್ಲಿ ದಾಖಲಾಗಿರುವ ಹಾಗೂ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾಗಿರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.

ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿ ದಂತೆ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಪಾವತಿಸಲು ಕಾಯುತ್ತಿರುವ ವಾಹನ ಮಾಲಕರು ಹಾಗೂ ಚಾಲಕರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆದ್ದರಿಂದ ಸಾರ್ವಜನಿಕರು ಈ ವಿಶೇಷ ರಿಯಾಯಿತಿಯ ಸದುಪಯೋಗ ಪಡೆದುಕೊಂಡು, ತಮ್ಮ ವಾಹನಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಹ ಇ-ಚಲನ್ ಪ್ರಕರಣಗಳ ದಂಡವನ್ನು ಶೇ.50ರಷ್ಟು ರಿಯಾಯಿತಿಯಲ್ಲಿ ಪಾವತಿಸುವ ಮೂಲಕ ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!