


ಬಂಟ್ವಾಳ: ಅನಂತಾಡಿ ಕ್ರಿಕೆಟ್ ಕ್ಲಬ್ (ರಿ.) ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 7ನೇ ವರ್ಷದ ಆತ್ಮೀಯ ಕ್ರೀಡಾಕೂಟ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನವೆಂಬರ್ 8ರಂದು ಬಾಬನಕಟ್ಟೆ, ಅನಂತಾಡಿಯಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ. ರಮಾನಾಥ ರೈ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕ್ಲಬ್‌ನ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನೇರಳಕಟ್ಟೆ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕ ಸನತ್ ಕುಮಾರ್ ರೈ, ನಿವೃತ್ತ ಪ್ರಧಾನ ವ್ಯವಸ್ಥಾಪಕ ಸಂಜೀವ ಪೂಜಾರಿ, ಎಸ್‌ಎಲ್‌ಸಿ ಅಸೋಸಿಯೇಟ್ಸ್‌ನ ಪಾಲುದಾರ ಲೋಕೇಶ್ ಪೂಜಾರಿ, ಮಾಣಿ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪೆರಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಶಲ ಎಂ. ಪೆರಾಜೆ ಹಾಗೂ ಅನಂತಾಡಿ ಗ್ರಾ.ಪಂ. ಮಾಜಿ ಸದಸ್ಯ ಪುರಂದರ ಗೌಡ ಭಾಗವಹಿಸಲಿದ್ದಾರೆ.ಕ್ರೀಡಾಕೂಟದಲ್ಲಿ ಅಂಗನವಾಡಿ ಮಕ್ಕಳಿಗೆ ಕಪ್ಪೆ ಜಿಗಿತ, ಓಟ ಸೇರಿದಂತೆ ವಿವಿಧ ಸ್ಪರ್ಧೆಗಳು, ಬಾಲಕ-ಬಾಲಕಿಯರಿಗೆ ಓಟ, ಲಿಂಬೆ ಚಮಚ ಓಟ, ಬಾಟಲಿಗೆ ನೀರು ತುಂಬಿಸುವುದು, ಕಬಡ್ಡಿ ಮುಂತಾದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಯುವಕರಿಗೆ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ ಹಾಗೂ ಮಹಿಳೆಯರಿಗೆ ಹಗ್ಗಜಗ್ಗಾಟ, ಮ್ಯೂಸಿಕಲ್ ರಿಂಗ್, ಬಾಟಲಿಗೆ ನೀರು ತುಂಬಿಸುವುದು ಸೇರಿದಂತೆ ಹಲವು ಮನರಂಜನಾ ಸ್ಪರ್ಧೆಗಳು ನಡೆಯಲಿವೆ. ವಿಶೇಷ ಆಕರ್ಷಣೆಯ ಸ್ಪರ್ಧೆಗಳನ್ನೂ ಆಯೋಜಿಸಲಾಗಿದ್ದು, ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟಗಳ ವಿಜೇತರಿಗೆ ನಗದು ಬಹುಮಾನ ನೀಡಿ ಗೌರವಿಸಲಾಗುವುದು.
ವಿಶೇಷ ಆಹ್ವಾನಿತರಾಗಿ ಬಿಜೆಪಿ ಪುತ್ತೂರು ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಬಿಜೆಪಿ ದಕ್ಷಿಣ ಕನ್ನಡದ ಯುವ ನಾಯಕ ಸಂದೇಶ್ ಶೆಟ್ಟಿ ಅರೆಬೆಟ್ಟು, ಸಿವಿಲ್ ಇಂಜಿನಿಯರ್ ರಾಮ್ ಪ್ರಸಾದ್ ರೈ ಕೊಂಬಿಲ, ಶಿವರಂಜನ್ ಪೂಂಜ ಬಾಳಿಕೆ, ರೋಷನ್ ಲಸ್ರಾದೊ, ಯಶವಂತ ಪೂಜಾರಿ ವಿಟ್ಲ, ಕಾಂಗ್ರೆಸ್ ಯುವ ನಾಯಕ ಫಾರೂಕ್ ಬಯಾಬೆ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.ಸಮಾರೋಪ ಸಮಾರಂಭಕ್ಕೆ ಧರ್ನಪ್ಪ ಗೌಡ ಕರಿಂಕ ಅಧ್ಯಕ್ಷತೆ ವಹಿಸಲಿದ್ದು, ರಂಗಭೂಮಿ ಕಲಾವಿದ ಚಂದ್ರಹಾಸ ಶೆಟ್ಟಿ ಮಾಣಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಗೀತಾ ಚಂದ್ರಶೇಖರ್, ಶಿಕ್ಷಕ ವೆಂಕಟೇಶ್ ಅನಂತಾಡಿ, ಎಸ್‌ಡಿಎಂಸಿ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಮಧ್ಯಾಹ್ನದ ಭೋಜನ ಹಾಗೂ ಸಂಜೆ ಚಹಾ-ತಿಂಡಿಯ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅನಂತಾಡಿ ಕ್ರಿಕೆಟ್ ಕ್ಲಬ್‌ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








