Tuesday, November 24, 2026
spot_imgspot_img
spot_imgspot_img

ವಿಟ್ಲ: ಬಶೀರ್ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ; ಗಾಳಿಸುದ್ದಿ ಹರಡದಂತೆ ಪೊಲೀಸರ ಮನವಿ

- Advertisement -
- Advertisement -


ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಬೊಲ್ಪಾದೆ ಎಂಬಲ್ಲಿ ಮೈದಾನದ ಬಳಿ ಇಬ್ಬರು ವ್ಯಕ್ತಿಗಳ ನಡುವೆ ಹೊಡೆದಾಟ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ.


ಗಲಾಟೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬರು ವಿಟ್ಲ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಸಾಲೆತ್ತೂರು ನಿವಾಸಿ ಬಶೀರ್ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಈ ಬಗ್ಗೆ ಬಶೀರ್‌ನನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ತಾನು ಕ್ಷೇಮವಾಗಿರುವುದಾಗಿ ತಿಳಿಸಿದ್ದು, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಅಲ್ಲದೆ, ಘಟನೆಯಿಂದ ಗಾಯಗೊಂಡು ಚಿಕಿತ್ಸೆಗಾಗಿ ಸುತ್ತಮುತ್ತಲಿನ ಯಾವುದೇ ಆಸ್ಪತ್ರೆಗಳಿಗೆ ಯಾರೂ ದಾಖಲಾಗಿರುವುದು ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


ಬಶೀರ್‌ನಿಂದ ವಂಚನೆಗೊಳಗಾದವರು ಆತನ ಮೇಲೆ ಹಲ್ಲೆ ನಡೆಸಿರಬಹುದೇ ಅಥವಾ ಈ ಸಂಬಂಧ ಸುಳ್ಳು ವದಂತಿಗಳನ್ನು ಹರಡಲಾಗುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನೆಯ ನೈಜ ಮಾಹಿತಿ ಲಭ್ಯವಾಗುವವರೆಗೆ ಯಾವುದೇ ಆಧಾರರಹಿತ ವದಂತಿಗಳನ್ನು ಹರಡಬಾರದು ಹಾಗೂ ಪ್ರಸಾರ ಮಾಡಬಾರದು ಎಂದು ವಿಟ್ಲ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!