Tuesday, September 8, 2026
spot_imgspot_img
spot_imgspot_img

ಪೆಪ್ಪರ್ ಸ್ಪ್ರೇ ಬಳಸಿ ಯುವತಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿ ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಆರೋಪ: ವೈದ್ಯನ ವಿರುದ್ಧ FIR

- Advertisement -
- Advertisement -

ಬೆಂಗಳೂರು: ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. ಸಹಕಾರ ನಗರದಲ್ಲಿನ ಡಯಾಗ್ನಾಸ್ಟಿಕ್ ಸೆಂಟರೊಂದರಲ್ಲಿ ವೈದ್ಯರಾಗಿರುವ ಯುವರಾಜ್ ಮನೋಹ‌ರ್ ಎಂಬಾತನ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.ಯುವರಾಜ್ ಮನೋಹರ್ ವಿರುದ್ಧ 30 ವರ್ಷದ ಸಂತ್ರಸ್ತ ಯುವತಿ ನೀಡಿರುವ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಅತ್ಯಾಚಾರ ಮತ್ತು ಬೆದರಿಕೆ ಕಾಯ್ದೆಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಹಿಂದಿನ ವರ್ಷ ಡಿ.15ರಂದು ಬೆಳಗ್ಗೆ ಕಚೇರಿಯಲ್ಲಿದ್ದಾಗ ಫೈಲ್‌ಗಳನ್ನು ಹುಡುಕುವ ನೆಪದಲ್ಲಿ ಡಯಾಗ್ನಾಸ್ಟಿಕ್ ಸೆಂಟರ್ ನ ಮೊದಲನೇ ಮಹಡಿಗೆ ಕರೆದೊಯ್ದಿದ್ದ ಆರೋಪಿ ಮುಖಕ್ಕೆ ಪೆಪ್ಪರ್ ಸ್ಪೇ ಹೊಡೆದಿದ್ದಾನೆ. ಅಸ್ವಸ್ಥಗೊಂಡು ಪ್ರಜ್ಞೆ ಕಳೆದುಕೊಂಡಾಗ ಅತ್ಯಾಚಾರ ಎಸಗಿ, ಇಡೀ ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

ವಿಡಿಯೋ ಬಳಸಿ ಬ್ಲಾಕ್‌ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.

ಸದ್ಯ ಸಂತ್ರಸ್ತೆ ನೀಡಿರುವ ದೂರಿನನ್ವಯ ವೈದ್ಯ ಯುವರಾಜ್‌ ಮನೋಹರ್ ವಿರುದ್ಧ ಎಫ್‌ಐಆ‌ರ್ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!