- Advertisement -
- Advertisement -

ವಿಟ್ಲ: ಹೊಳೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು 60 ಚೀಲ ಮರಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟು-ನೆಕ್ಕರೆ ಪ್ರದೇಶದಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ಕುಳ ಗ್ರಾಮದ ಕಾರ್ಯಾಡಿ ನಿವಾಸಿ ಮಹಮ್ಮದ್ ಹಾಗೂ ಒಕ್ಕೆತ್ತೂರು ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ.
ಇವರು ಕಂಬಳಬೆಟ್ಟು-ನೆಕ್ಕರೆ ಪ್ರದೇಶದ ಹೊಳೆಯಿಂದ ಗೋಣಿ ಚೀಲಗಳಲ್ಲಿ ಅಕ್ರಮವಾಗಿ ಮರಳು ತುಂಬಿ ಸಂಗ್ರಹಿಸುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಎಸ್ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ದಾಳಿಯ ವೇಳೆ ಸ್ಥಳದಿಂದ 60 ಗೋಣಿ ಚೀಲಗಳ ಮರಳನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ
- Advertisement -








