- Advertisement -
- Advertisement -

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಉಕ್ಕುಡದ ದರ್ಬೆ ಬಳಿ ನಡೆದಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಪುತ್ತೂರು ಮೂಲದ ದಿನೇಶ್ ಹಾಗೂ ಅಂಕಿತ್ ಎಂದು ಗುರುತಿಸಲಾಗಿದೆ.
ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
- Advertisement -








