Tuesday, July 28, 2026
spot_imgspot_img
spot_imgspot_img

ಬಿ.ಸಿ.ರೋಡ್ ಬಸ್ ನಿಲ್ದಾಣದ ಯುವತಿ ಹತ್ಯೆ ಪ್ರಕರಣ: ಚಿಕಿತ್ಸೆ ಬಳಿಕ ಆರೋಪಿ ಪೊಲೀಸ್ ವಶಕ್ಕೆ, ಸ್ಥಳ ಮಹಜರು ನಡೆಸಿದ ತನಿಖಾಧಿಕಾರಿಗಳು

- Advertisement -
- Advertisement -

ಬಂಟ್ವಾಳ, ಜು. 28: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಜುಲೈ 16ರಂದು ನಡೆದಿದ್ದ ಯುವತಿ ಹತ್ಯೆ ಪ್ರಕರಣದ ಆರೋಪಿ ಚಿಕಿತ್ಸೆ ಪೂರ್ಣಗೊಂಡ ಬಳಿಕ ಮಂಗಳವಾರ ಪೊಲೀಸರ ವಶಕ್ಕೆ ಬಂದಿದ್ದಾನೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಜುಲೈ 28ರಂದು ಆಸ್ಪತ್ರೆಯಿಂದ ಬಿಡುಗಡೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಬಳಿಕ ಹೆಚ್ಚಿನ ತನಿಖೆಗಾಗಿ ನ್ಯಾಯಾಲಯವು ಆರೋಪಿಯನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಇದೇ ವೇಳೆ, ತನಿಖೆಯ ಭಾಗವಾಗಿ ಪೊಲೀಸರು ಆರೋಪಿಯನ್ನು ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಘಟನೆ ನಡೆದ ಸ್ಥಳಕ್ಕೆ ಕರೆತಂದು ಮಹಜರು (Scene Mahazar) ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!