- Advertisement -
- Advertisement -

ಮೈಸೂರು: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ, ಬಹುಭಾಷಾ ಗಾನಕೋಗಿಲೆ ಎಸ್. ಜಾನಕಿ (88) ಅವರು ವಯೋಸಹಜ ಅನಾರೋಗ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕನ್ನಡ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದ ಎಸ್. ಜಾನಕಿ ಅವರು ತಮ್ಮ ಮಾಧುರ್ಯಭರಿತ ಕಂಠಸಿರಿಯ ಮೂಲಕ ಹಲವು ತಲೆಮಾರುಗಳ ಸಂಗೀತಪ್ರಿಯರ ಮನ ಗೆದ್ದಿದ್ದರು. ದಶಕಗಳ ಕಾಲ ಭಾರತೀಯ ಚಿತ್ರಸಂಗೀತ ಕ್ಷೇತ್ರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ್ದ ಅವರು ಅನೇಕ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್. ಜಾನಕಿ ಅವರ ಅಗಲಿಕೆಯಿಂದ ಭಾರತೀಯ ಸಂಗೀತ ಕ್ಷೇತ್ರವು ತನ್ನ ಅಪರೂಪದ ಗಾನಮಣಿಯನ್ನು ಕಳೆದುಕೊಂಡಂತಾಗಿದೆ. ಅವರ ಹಾಡುಗಳು ಮುಂದಿನ ಪೀಳಿಗೆಗಳಿಗೂ ಸದಾ ಸ್ಫೂರ್ತಿಯಾಗಲಿವೆ.
- Advertisement -








