Tuesday, August 18, 2026
spot_imgspot_img
spot_imgspot_img

ಕೋಡಿಕ್ಕಲ್‌ನಲ್ಲಿ ಸ್ಕೂಟರ್ ಕಳವು: 40ಕ್ಕೂ ಅಧಿಕ ಪ್ರಕರಣಗಳ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು: ನಗರದ ಕೋಡಿಕ್ಕಲ್‌ ಪ್ರದೇಶದಲ್ಲಿ ಮನೆಯ ಎದುರು ನಿಲ್ಲಿಸಿದ್ದ ಹೊಂಡಾ ಡಿಯೋ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವಾ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ, ಕಳವಾಗಿದ್ದ ದ್ವಿಚಕ್ರ ವಾಹನವನ್ನು ಪತ್ತೆಹಚ್ಚಿದ್ದಾರೆ.

ಬಂಧಿತನನ್ನು ಉಳ್ಳಾಲದ ಕೋಡಿ ನ್ಯೂ ತೋಟ ಹೌಸ್ ನಿವಾಸಿ, ಸುಮಾರು 40 ವರ್ಷದ ಮಹಮ್ಮದ್ ಫೈಜಲ್ ಅಲಿಯಾಸ್ ತೋಟ ಫೈಜಲ್ ಎಂದು ಗುರುತಿಸಲಾಗಿದೆ.ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್‌ನಲ್ಲಿ ವಾಸದ ಮನೆಯ ಎದುರು ನಿಲ್ಲಿಸಲಾಗಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಜುಲೈ 24ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 303(2)ರಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು.

ತನಿಖೆಯ ವೇಳೆ ಪೊಲೀಸರು ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ, ಆರೋಪಿಯ ಚಹರೆಯನ್ನು ಗುರುತಿಸುವ ಜೊತೆಗೆ ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿದ್ದರು. ಈ ಮೂಲಕ ಆರೋಪಿಯ ಜಾಡು ಪತ್ತೆಹಚ್ಚಿದ ಪೊಲೀಸರು, ಆಗಸ್ಟ್ 18ರಂದು ಮಹಮ್ಮದ್ ಫೈಜಲ್‌ನನ್ನು ಬಂಧಿಸಿ, ಕಳವಾಗಿದ್ದ ಸ್ಕೂಟರ್‌ನ್ನೂ ಪತ್ತೆ ಮಾಡಿದ್ದಾರೆ.40ಕ್ಕೂ ಅಧಿಕ ಪ್ರಕರಣಗಳಲ್ಲಿ ಹೆಸರುಪೊಲೀಸರ ಪ್ರಕಾರ, ಬಂಧಿತ ಮಹಮ್ಮದ್ ಫೈಜಲ್ ವಿರುದ್ಧ ಕರ್ನಾಟಕ ಮತ್ತು ಕೇರಳ ರಾಜ್ಯಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ 40ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.

ಅಲ್ಲದೆ, ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆ, ಕೊಣಾಜೆ, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಗ್ರಾಮಾಂತರ ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಆತನ ವಿರುದ್ಧ ಪ್ರಸ್ತುತ ದಸ್ತಗಿರಿ ವಾರೆಂಟ್‌ಗಳು ಇರುವುದಾಗಿ ತನಿಖೆಯಿಂದ ತಿಳಿದುಬಂದಿದೆ.ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯ ಹಿಂದಿನ ಪ್ರಕರಣಗಳು ಹಾಗೂ ಇತರ ಕಳವು ಪ್ರಕರಣಗಳೊಂದಿಗೆ ಆತನಿಗೆ ಇರುವ ಸಂಬಂಧದ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!