Thursday, October 29, 2026
spot_imgspot_img
spot_imgspot_img

ಬಂಟ್ವಾಳ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

- Advertisement -
- Advertisement -

ಬಂಟ್ವಾಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯ 2007ರ (ಅ.ಕ್ರ.139/2007) ಅಪಹರಣ, ಅಕ್ರಮ ಬಂಧನ, ವಂಚನೆ ಹಾಗೂ ಸಂಚು ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಪ್ರಕರಣದಲ್ಲಿ ಮಂಚಿ ನಿವಾಸಿ ಇರ್ಷಾದ್ @ ಮಹಮ್ಮದ್ ಇರ್ಷಾದ್ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಅ.21ರಂದು ಎಎಸ್‌ಐ ಸುಜು ಹಾಗೂ ಸಿಬ್ಬಂದಿ ಜಗದೀಶ್ ಮತ್ತು ಮಂಜುನಾಥ್ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Related news

error: Content is protected !!