Sunday, September 20, 2026
spot_imgspot_img
spot_imgspot_img

ಧರ್ಮಸ್ಥಳ: ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ-ಪುತ್ತೂರು ಮೂಲದ ಶ್ರೇಯಸ್ ಮತ್ತು ಅಭಿಷೇಕ್ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

- Advertisement -
- Advertisement -

ಧರ್ಮಸ್ಥಳ: ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಪೂರ್ವಾನುಮತಿ ಪಡೆಯದೆ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಿದೆ.ಇಬ್ಬರು ಯುವಕರು ರಕ್ಷಿತಾರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಸ್ಥಳೀಯರು ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.ಈ ಹಿನ್ನೆಲೆಯಲ್ಲಿ, ಪೂರ್ವಾನುಮತಿ ಪಡೆಯದೆ ರಕ್ಷಿತಾರಣ್ಯ ಪ್ರವೇಶಿಸಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ದೂರು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಇಬ್ಬರು ಯುವಕರು ಠಾಣೆಗೆ ಬಂದ ಸಂದರ್ಭದಲ್ಲಿ ಅವರ ಮೇಲೆ ಯಾವುದೇ ಹಲ್ಲೆ ಅಥವಾ ತೊಂದರೆ ಉಂಟಾಗಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಬಗ್ಗೆ ಚರ್ಚಿಸಿ ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ಯುವಕರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಪ್ರಸ್ತುತ ಯಾವುದೇ ಹಲ್ಲೆ ಅಥವಾ ಇತರ ದೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

- Advertisement -

Related news

error: Content is protected !!