- Advertisement -
- Advertisement -

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ಮಾಜಿ ಅಧ್ಯಕ್ಷ, ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.



ನ್ಯಾಯಾಂಗ ಬಂಧನದಲ್ಲಿದ್ದ ಬಂಧಿತ ಆರೋಪಿಗಳಾದ ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ನೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಎಂಬವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ನಿರೀಕ್ಷಕ ಅಝತ್ ಅಲಿ ನೇತೃತ್ವದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಪೊಲೀಸರು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಧೀಶ ಪುರುಷೋತ್ತಮರಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.
- Advertisement -







