
ಪುತ್ತೂರು: ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಕೆಎಸ್ಆರ್ಟಿಸಿ ಬಸ್ವೊಂದು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ಗೆ ನುಗ್ಗಿದ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.ದರ್ಬೆಯ ದುಗ್ಗಮ್ಮ ದೇರಣ್ಣ ಹಾಲ್ನ ಸಮೀಪ ಬೆಳಗ್ಗೆ ಸುಮಾರು 8 ಗಂಟೆಗೆ ಘಟನೆ ಸಂಭವಿಸಿದೆ. ಪುತ್ತೂರಿನಿಂದ ಕುಂಬ್ರದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ದರ್ಬೆ ವೃತ್ತವನ್ನು ದಾಟಿ ಫಿಲೋಮಿನಾ ಕಾಲೇಜು ಸಮೀಪಿಸುತ್ತಿದ್ದ ವೇಳೆ ಎದುರಿನಿಂದ ಲಾರಿಯೊಂದು ಬಂದಿದೆ ಎನ್ನಲಾಗಿದೆ.
ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಸಲುವಾಗಿ ಚಾಲಕ ಬಸ್ಸನ್ನು ಎಡಭಾಗಕ್ಕೆ ತಿರುಗಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಿಂದ ಸುಮಾರು 50 ಅಡಿ ದೂರ ಸಾಗಿ ಮನೆಯ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದೆ.ಬಸ್ನ ಬ್ರೇಕ್ ವೈಫಲ್ಯಗೊಂಡಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಬಸ್ ಚಾಲಕನಿಗೆ ಗಾಯಗಳಾಗಿವೆ. ಬಸ್ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಇರಲಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಕ್ರೇನ್ ಸಹಾಯದಿಂದ ಬಸ್ನ್ನು ಮೇಲಕ್ಕೆತ್ತಿ ಸ್ಥಳಾಂತರಿಸಲಾಯಿತು. ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








