Monday, September 7, 2026
spot_imgspot_img
spot_imgspot_img

ಡಿವೈಡರ್‌ಗೆ ಕಾರು ಡಿಕ್ಕಿ–ಒಂದೇ ಕುಟುಂಬದ ನಾಲ್ವರು ಸಾವು

- Advertisement -
- Advertisement -

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡ ಕಾರಿ ಬಳಿ ನಡೆದಿದೆ.

ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ(70), ದೀಕ್ಷಿತ(25), ದೇವೆಂದ್ರ ಕುಮಾರ್(41), ಜಿಷ್ಣು(13) ಮೃತಪಟ್ಟವರು.

ಕುಟುಂಬಸ್ಥರು ಸೇರಿಕೊಂಡು ತಿರುಪತಿಗೆ ತೆರಳಿದ್ದರು. ತಿರುಪತಿಯ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಈ ವೇಳೆ ಟೊಯೋಟಾ ರಿಯಾನ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ವಿಕಾಸ್, ನೀತು, ಆದ್ವಿಕ ಎಂಬ ಮೂವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!