Thursday, July 23, 2026
spot_imgspot_img
spot_imgspot_img

ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ದುರಂತ: ಯುಕೆಜಿ ವಿದ್ಯಾರ್ಥಿ ಮೃತ್ಯು – ಇಬ್ಬರು ಮಕ್ಕಳು ಗಾಯ- ಪ್ರಕರಣ ದಾಖಲು

- Advertisement -
- Advertisement -


ಬಂಟ್ವಾಳ: ಬಂಟ್ವಾಳ ತಾಲೂಕಿನ ಬರೀಮಾರು ಗ್ರಾಮದ ಕಲ್ಲೇಟ್ಟಿ ದೈವಸ್ಥಾನದ ಸಮೀಪ ಬುಧವಾರ (ಜು.22) ಸಂಜೆ ನಡೆದ ಹೃದಯವಿದ್ರಾವಕ ಘಟನೆಯಲ್ಲಿ, ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಯುಕೆಜಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.


ಸಂಜೆ ಸುಮಾರು 5 ಗಂಟೆ ವೇಳೆಗೆ ಶಾಲಾ ಬಸ್ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಚಿರಸ್ವಿ, ಯುಕೆಜಿ ವಿದ್ಯಾರ್ಥಿ (ಮಾಣಿ ಕಲ್ಲೇಟ್ಟಿ ನಿವಾಸಿ) ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗಾಯಾಳು ಮಕ್ಕಳನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!