- Advertisement -
- Advertisement -

ವೇಣೂರು: ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 61 ವರ್ಷದ ವ್ಯಕ್ತಿಯ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತನ ವಿರುದ್ಧ ಯುವತಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಅ.24ರಂದು ಮಧ್ಯಾಹ್ನ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಯು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 73/2026ರಂತೆ ಬಿಎನ್ಎಸ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








