Wednesday, July 15, 2026
spot_imgspot_img
spot_imgspot_img

ರೇಷನ್ ಅಂಗಡಿಗಳಲ್ಲಿ ಸ್ಯಾನಿಟರಿ ಪ್ಯಾಡ್ ವಿತರಣೆ? ಕೇಂದ್ರ-ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

- Advertisement -
- Advertisement -

ನವದೆಹಲಿ, ಜು. 14: ದೇಶಾದ್ಯಂತ ರೇಷನ್ ಅಂಗಡಿಗಳ ಮೂಲಕ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.ಅರ್ಜಿಯಲ್ಲಿ, ಸ್ಯಾನಿಟರಿ ಪ್ಯಾಡ್‌ಗಳು ಜನೌಷಧಿ ಕೇಂದ್ರಗಳಲ್ಲಿ ತಲಾ 1 ರೂಪಾಯಿಗೆ ಲಭ್ಯವಿದ್ದರೂ, ದೇಶಾದ್ಯಂತ ಕೇವಲ 19,294 ಜನೌಷಧಿ ಕೇಂದ್ರಗಳಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (PDS) 4.8 ಲಕ್ಷಕ್ಕೂ ಅಧಿಕ ನ್ಯಾಯಬೆಲೆ ಅಂಗಡಿಗಳಿವೆ ಎಂದು ಉಲ್ಲೇಖಿಸಲಾಗಿದೆ.ಆದ್ದರಿಂದ, ವ್ಯಾಪಕ ಜಾಲ ಹೊಂದಿರುವ ರೇಷನ್ ಅಂಗಡಿಗಳ ಮೂಲಕ ಉಚಿತವಾಗಿ ಅಥವಾ ನಿಗದಿತ ಕೋಟಾದ ಭಾಗವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಇದರಿಂದ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಹಾಗೂ ಹದಿಹರೆಯದ ಬಾಲಕಿಯರಿಗೆ ಋತುಚಕ್ರದ ನೈರ್ಮಲ್ಯ ಉತ್ಪನ್ನಗಳು ಸುಲಭವಾಗಿ ಲಭ್ಯವಾಗುವುದರ ಜೊತೆಗೆ ಜಾಗೃತಿಯೂ ಹೆಚ್ಚಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತಿ ತಿಂಗಳು ಖರೀದಿಸುವುದು ಬಡ ಕುಟುಂಬಗಳ ಮಹಿಳೆಯರಿಗೆ ಆರ್ಥಿಕ ಹೊರೆಯಾಗಿದ್ದು, ಕೈಗೆಟುಕುವ ಉತ್ಪನ್ನಗಳ ಕೊರತೆ ಹಾಗೂ ಜಾಗೃತಿಯ ಅಭಾವದಿಂದ ಆರೋಗ್ಯ ಸಮಸ್ಯೆಗಳು ಮತ್ತು ಸೋಂಕಿನ ಅಪಾಯ ಹೆಚ್ಚುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೋರಿದೆ.

- Advertisement -

Related news

error: Content is protected !!