Friday, July 31, 2026
spot_imgspot_img
spot_imgspot_img

ಒಡಿಯೂರು ಶ್ರೀಗಳವರ ಜನ್ಮದಿನೋತ್ಸವ ಅಂಗವಾಗಿ ಆ.2ರಂದು ಬೃಹತ್ ಉಚಿತ ವೈದ್ಯಕೀಯ ಸೇವಾ ಶಿಬಿರ

- Advertisement -
- Advertisement -

ಬೆಳ್ತಂಗಡಿ: ಪೂಜ್ಯ ಒಡಿಯೂರು ಶ್ರೀಗಳವರ ಜನ್ಮದಿನೋತ್ಸವದ ಪ್ರಯುಕ್ತ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ವತಿಯಿಂದ ಆಗಸ್ಟ್ 2, 2026 (ಭಾನುವಾರ) ರಂದು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಬೃಹತ್ ಉಚಿತ ವೈದ್ಯಕೀಯ ಸೇವಾ ಶಿಬಿರ ಆಯೋಜಿಸಲಾಗಿದೆ.ಶಿಬಿರದಲ್ಲಿ ರಕ್ತದಾನ, ಹೃದಯ, ಎಲುಬು ಹಾಗೂ ದಂತ ತಪಾಸಣೆ-ಚಿಕಿತ್ಸೆ, ಆಯುಷ್ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸೆ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳು ಲಭ್ಯವಿರಲಿವೆ.ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ದೀಪೋಜ್ವಲನ ನೆರವೇರಿಸಿ ಆಶೀರ್ವಚನ ನೀಡಲಿದ್ದು, ಸಾದ್ವಿ ಶ್ರೀ ಶ್ರೀ ಮಾತಾನಂದಮಯೀ ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.

ವಿವಿಧ ವೈದ್ಯಕೀಯ ಸಂಸ್ಥೆಗಳ ತಜ್ಞ ವೈದ್ಯರು ಹಾಗೂ ಗಣ್ಯರು ಗೌರವ ಉಪಸ್ಥಿತರಾಗಿ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ.ಈ ಶಿಬಿರಕ್ಕೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಎ.ಬಿ. ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಮಹಾವಿದ್ಯಾಲಯ, ಪ್ರಸಾದ್ ನೇತ್ರಾಲಯ, ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಕನ್ಯಾನ, ಶಾರದಾ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸೇರಿದಂತೆ ಹಲವು ಸಂಸ್ಥೆಗಳು ಸಹಯೋಗ ನೀಡುತ್ತಿವೆ.

ಸಾರ್ವಜನಿಕರು ಈ ಉಚಿತ ವೈದ್ಯಕೀಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜನ್ಮದಿನೋತ್ಸವ ಸಮಿತಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.

- Advertisement -

Related news

error: Content is protected !!