- Advertisement -
- Advertisement -

ಪುತ್ತೂರು /ಬೆಂಗಳೂರು: ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತ ಯುವತಿಗೆ ಮಾಸಿಕವಾಗಿ ನೀಡಲಾಗುತ್ತಿರುವ ₹75 ಸಾವಿರ ಆರ್ಥಿಕ ನೆರವನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಹೈಕೋರ್ಟ್ ಸೂಚಿಸಿದೆ.
ರಾಜಿ ಸಂಧಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಪ್ರತಿ ತಿಂಗಳ 2ನೇ ತಾರೀಖಿನೊಳಗೆ ₹75 ಸಾವಿರವನ್ನು ಸಂತ್ರಸ್ತೆಗೆ ಪಾವತಿಸಬೇಕು ಎಂದು ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ. ನ್ಯಾಯಾಲಯದ ಈ ಸೂಚನೆಯ ಮೂಲಕ ಸಂತ್ರಸ್ತೆಗೆ ನಿರಂತರ ಆರ್ಥಿಕ ನೆರವು ದೊರೆಯುವಂತೆ ಕ್ರಮ ಕೈಗೊಳ್ಳಲಾಗಿದೆ.ಪ್ರಕರಣದ ರಾಜಿ ಸಂಧಾನ ಪ್ರಕ್ರಿಯೆ ಇನ್ನೂ ಮುಂದುವರಿದಿದ್ದು, ಅದರ ಅಂತಿಮ ತೀರ್ಮಾನವಾಗುವವರೆಗೆ ನ್ಯಾಯಾಲಯದ ಈ ಮಧ್ಯಂತರ ಆದೇಶ ಜಾರಿಯಲ್ಲಿರಲಿದೆ.
- Advertisement -








