Monday, July 6, 2026
spot_imgspot_img
spot_imgspot_img

ಪುತ್ತೂರಿನಲ್ಲಿ ಜಿಮ್ ಟ್ರೈನರ್ ಸಚಿನ್ ರೈ ನಿಗೂಢ ಸಾವು!-ಸಂಶಯ ವ್ಯಕ್ತಪಡಿಸಿ ತಾಯಿಯಿಂದ ಪೊಲೀಸ್ ದೂರು

- Advertisement -
- Advertisement -

ಪುತ್ತೂರು: ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಿದ್ದ ಜಿಮ್ ಟ್ರೈನರ್ ಸಚಿನ್ ರೈ ಅವರು ಮೃತಪಟ್ಟಿದ್ದು, ಅವರ ಸಾವಿನ ಕುರಿತು ಸಂಶಯ ವ್ಯಕ್ತಪಡಿಸಿ ತಾಯಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೂಲತಃ ಮಡಂತ್ಯಾರ್ ನಿವಾಸಿಯಾಗಿದ್ದ ಸಚಿನ್ ರೈ, ಕಳೆದ ಹಲವು ವರ್ಷಗಳಿಂದ ಜಿಮ್ ಟ್ರೈನರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರಸ್ತುತ ಅವರು ಪುತ್ತೂರಿನ ಕಲ್ಲಿಮಾರ್‌ನಲ್ಲಿ ವಾಸವಾಗಿದ್ದರು.ಜುಲೈ 5ರಂದು ಬೆಳಿಗ್ಗೆ ಸಚಿನ್ ರೈ ಅವರು ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತರು ತಾಯಿ ಗುಲಾಬಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ತಮ್ಮ ಮಗನ ಸಾವಿನಲ್ಲಿ ಸಂಶಯವಿದೆ ಎಂದು ಆರೋಪಿಸಿ ಗುಲಾಬಿ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!