Friday, April 19, 2024
spot_imgspot_img
spot_imgspot_img

ರಾಜ್ಯದಲ್ಲಿ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ!

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ 6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕೊರೊನಾದಿಂದ 9 ತಿಂಗಳಿಗೂ ಹೆಚ್ಚು ಕಾಲದಿಂದ ಬಂದ್ ಆಗಿದ್ದ ಶಾಲೆಗಳು ಹಂತ ಹಂತವಾಗಿ ಆರಂಭವಾಗಿವೆ. 6 ರಿಂದ 10 ನೇ ತರಗತಿ ಶಾಲೆಗಳು ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ,6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಬೇಕು ಎಂದು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ರಾಧ ಎಂಬುವರು ಹೈಕೋರ್ಟ್ ಗೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 15 ರಿಂದ ಬಿಸಿಯೂಟ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

- Advertisement -

Related news

error: Content is protected !!