Saturday, May 18, 2024
spot_imgspot_img
spot_imgspot_img

6.5 ಮೀಟರ್‌ ಎತ್ತರದ, 9,500 ಕೆ.ಜಿ. ತೂಕದ ರಾಷ್ಟ್ರ ಲಾಂಛನ ಅನಾವರಣಗೊಳಿಸಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ನವದೆಹಲಿ: ನೂತನ ಸಂಸತ್ ಭವನದ ಮೇಲೆ ಸ್ಥಾಪಿಸಲಾಗಿರುವ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅನಾವರಣಗೊಳಿಸಿದರು.

ಕಂಚಿನದಲ್ಲಿ ನಿರ್ಮಿಸಲಾಗಿರುವ ನಾಲ್ಕು ದಿಕ್ಕುಗಳನ್ನು ನೋಡುತ್ತಿರುವ ಸಿಂಹಗಳ ಮುಖಗಳಿರುವ ‘ರಾಷ್ಟ್ರ ಲಾಂಛನ 9,500 ಕೆ.ಜಿ. ತೂಕವಿದ್ದು, 6.5 ಮೀಟರ್‌ ಎತ್ತರದ ಈ ಕಂಚಿನ ಲಾಂಛನ ದೇಶದ ಹೆಮ್ಮೆಯಾಗಿದೆ.

ಹೊಸ ಸಂಸತ್ ಭವನದ ಕೇಂದ್ರ ದ್ವಾರದ ಮೇಲ್ಭಾಗದಲ್ಲಿ ಇದನ್ನು ಸ್ಥಾಪಿಸಲಾಗಿದೆ ಇದಕ್ಕೆ ಆಧಾರವಾಗಿ ಸ್ಟೀಲ್‌ನಲ್ಲಿ ರಚನೆಯನ್ನು ನಿರ್ಮಿಸಲಾಗಿದ್ದು, ಅದರ ತೂಕ 6,500 ಕೆ.ಜಿಯಷ್ಟಿದೆ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ಭವ್ಯವಾದ ಹೊಸ ಸಂಸತ್ತಿನ ಕಟ್ಟಡದ ನಿರ್ಮಾಣದಲ್ಲಿ ತೊಡಗಿರುವ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!