

ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಜಾತ್ರೆಯೊಂದರಲ್ಲಿ ಅರ್ಚಕರೊಬ್ಬರು 20ಕ್ಕೂ ಹೆಚ್ಚು ಕುರಿಗಳ ಕತ್ತು ಕಚ್ಚಿ ರಕ್ತ ಕುಡಿದ ಘಟನೆ ಕಂಡು ಬಂದಿದೆ.
ಕುರಿಗಳ ರಕ್ತವನ್ನು ಕುಡಿದು ದೇವರನ್ನು ಸಂಪ್ರೀತಗೊಳಿಸಿದ ವಿಲಕ್ಷಣ ಘಟನೆ ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪ್ರತಿ ಪಾಲ್ಗುಣ ಮಾಸದಲ್ಲಿ ನಡೆಯುವ ಗ್ರಾಮದ ದೊಡ್ಡಮ್ಮತಾಯಿ ಜಾತ್ರೆಯಲ್ಲಿ ಕುರಿ ರಕ್ತ ಕುಡಿಯುವ ಸಂಪ್ರದಾಯ ನಡೆಯುತ್ತದೆ. ಅದೇ ರೀತಿ ನಿನ್ನೆ ರಾತ್ರಿ ನಡೆದ ಜಾತ್ರೆಯಲ್ಲಿ ಅರ್ಚಕ ಮಾದಶೆಟ್ಟಿ ೨೦ಕ್ಕೂ ಹೆಚ್ಚು ಕುರಿಗಳ ಕತ್ತು ಕಚ್ಚಿ ರಕ್ತ ಕುಡಿದಿದ್ದಾರೆ ಎಂದು ಭಕ್ತರೊಬ್ಬರು ತಿಳಿಸಿದ್ದಾರೆ.
ದೊಡ್ಡಮ್ಮತಾಯಿ ರಥದಲ್ಲಿ ನಿಂತಿರುವ ಅರ್ಚಕನಿಗೆ ಅಲ್ಲೇ ಬಲಿಕೊಟ್ಟ ಕುರಿಯನ್ನು ನೀಡಿದಾಗ ಹಲ್ಲಿನಿಂದ ಕಚ್ಚಿ ರಕ್ತ ಸೇವಿಸಿದ್ದಾರೆ. ಈ ರೀತಿ ಮಾಡುವುದರಿಂದ ದೇವರನ್ನು ಸಂತೃಪ್ತಿಗೊಳಿಸಿದ ಹಾಗೆ ಎಂಬುದು ಭಕ್ತಾಧಿಗಳ ನಂಬಿಕೆಯಾಗಿದೆ.
ಹರಕೆ ಹೊತ್ತ ಭಕ್ತರು ಜಾತ್ರೆ ವೇಳೆ ಪ್ರಾಣಿಗಳ ಬಲಿ ಕೊಡುವಾಗ ಅರ್ಚಕ ಪ್ರತಿ ಪ್ರಾಣಿಯನ್ನು ತನ್ನ ಹಲ್ಲಿನಿಂದ ಕಚ್ಚಿ ರಕ್ತ ಕುಡಿಯುವುದು ತಲೆತಲಾಂತರಗಳಿoದ ನಡೆದುಕೊಂಡು ಬಂದಿದೆ. ಬಲಿಕೊಟ್ಟ ಕುರಿಯಿಂದ ಖಾದ್ಯ ತಯಾರಿಸಿ ತಮ್ಮ – ತಮ್ಮ ಸಂಬoಧಿಕರಿಗೆ ಉಣ ಬಡಿಸುತ್ತೇವೆ ಎಂದು ಗ್ರಾಮಸ್ಥರೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ವಿಲಕ್ಷಣ ಸಂಪ್ರದಾಯವೊoದು ತಲೆತಲಾಂತರಗಳಿoದ ನಡೆದುಕೊಂಡು ಬರುತ್ತಿರುವುದು ಅಚ್ಚರಿಯೇ ಆಗಿದೆ.

