Tuesday, July 21, 2026
spot_imgspot_img
spot_imgspot_img

ಮೊಬೈಲ್ ವಿಚಾರಕ್ಕೆ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ: ಕೊಡಲಿಯಿಂದ ಕೊಂದು ಪರಾರಿಯಾಗಿದ್ದ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಾಟಿಪಳ್ಳ ಗ್ರಾಮದ ಚೊಕ್ಕಬೆಟ್ಟು, ಕೃಷ್ಣಮಠ ರಸ್ತೆಯ ಬಾಡಿಗೆ ಮನೆಯಲ್ಲಿ ನಡೆದ ಭೀಕರ ಘಟನೆಯಲ್ಲಿ ಅಣ್ಣನೊಬ್ಬ ತನ್ನ ತಮ್ಮನನ್ನು ಕೊಡಲಿಯಿಂದ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.ಕಳೆದ ಐದು ವರ್ಷಗಳಿಂದ ರೇಖಾ ಅವರ ಬಾಡಿಗೆ ಮನೆಯಲ್ಲಿ ಶಿವಲೀಲಾ ಹಾಗೂ ಆಕೆಯ ಇಬ್ಬರು ಪುತ್ರರಾದ ಸೋಮನಾಥ ಮತ್ತು ಮಲ್ಲಿಕಾರ್ಜುನ ವಾಸವಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದರು.ಜುಲೈ 19ರಂದು ರಾತ್ರಿ ಸುಮಾರು 11 ಗಂಟೆಗೆ, ಮಲ್ಲಿಕಾರ್ಜುನ ಮೊಬೈಲ್‌ನಲ್ಲಿ ಯುವತಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ವಿಚಾರವಾಗಿ ಅಣ್ಣ ಸೋಮನಾಥ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ತಮ್ಮ ಮಲ್ಲಿಕಾರ್ಜುನ ಅಣ್ಣನಿಗೆ ಬೈದಿದ್ದಾನೆ ಎನ್ನಲಾಗಿದೆ.

ಇದರಿಂದ ಕೋಪಗೊಂಡ ಸೋಮನಾಥ, ತಮ್ಮ ಮಲಗಿದ ಬಳಿಕ ಮನೆಯಲ್ಲಿದ್ದ ಕೊಡಲಿಯಿಂದ ತಲೆ ಹಾಗೂ ಮುಖಕ್ಕೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 89/2026ರಡಿ ಬಿಎನ್‌ಎಸ್ ಕಲಂ 103(1) ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.ತನಿಖೆ ವೇಳೆ ಕೃಷ್ಣಾಪುರ ಮಠ ರಸ್ತೆ ಸಮೀಪದ ಪೊದೆಯಲ್ಲಿ ಅಡಗಿ ಕುಳಿತಿದ್ದ ಆರೋಪಿ ಸೋಮನಾಥನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

- Advertisement -

Related news

error: Content is protected !!